For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ಭಾರತದ ರಾಷ್ತ್ರೀಯ ಧ್ವಜ

1. ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.

2. ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.

3. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ

4. ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು.

5. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.

6. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು

7. ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

8. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

9. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.

10. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.

11. ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ ..
Post by : Chaluvraj sir

Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com