For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ಕಲ್ಯಾಣಿ ಚಾಲುಕ್ಯರು


ಕಲ್ಯಾಣಿ ಚಾಲುಕ್ಯರು

ಕಲ್ಯಾಣಿ ಚಾಲುಕ್ಯರು

ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು


ಆಧಾರಗಳು

ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ


ರಾಜಕೀಯ ಇತಿಹಾಸ

ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ


ಆರನೇ ವಿಕ್ರಮಾಧಿತ್ಯ

ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು


ಮೂರನೇ ಸೋಮೇಶ್ವರ :-

6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ

ಕಲ್ಯಾಣಿ ಚಾಲುಕ್ಯರ ಆಡಳಿತ

ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ


ಸಾಹಿತ್ಯ ( ಕನ್ನಡ )

ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ
Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com