For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ


*🌻ದಿನಕ್ಕೊಂದು ಕಥೆ🌻
 ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ*

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಆ ರೀತಿಯ ಸಂದೇಶವನ್ನು ನೀಡುವ ಒಂದು ಒಳ್ಳೆಯ ಕಥೆ ಸದ್ಯಕ್ಕೆ ವೈರಲ್ ಆಗಿದೆ. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ ಈ ಕಥೆಯಲ್ಲಿ.




ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ. ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು. ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.




ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ.




ಕೃಪೆ: kannada+.

ಸಂಗ್ರಹ :ವೀರೇಶ್ ಅರಸಿಕೆರೆ.
Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com